ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಮಣಿಕರ್ಣಿಕಾ ಚಿತ್ರ ಈಗಾಗಲೇ ಸಖತ್ ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಗೆ ಎಲ್ಲಾ ಸಿದ್ಧತೆಗಳು ನಡೆದಿದ್ದು ನಾಳೆ ದೇಶದಾದ್ಯಂತ ತೆರೆ ಕಾಣಲಿದೆ.
ಮಣಿಕರ್ಣಿಕಾ ಚಿತ್ರ ಬಿಡುಗಡೆ ಸಂಭ್ರಮದ ನಡುವೆ ಚಿತ್ರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದ್ದು, ಚಿತ್ರದಲ್ಲಿ ರಜಪೂತ ರಾಣಿ ಲಕ್ಷ್ಮೀ ಬಾಯಿ ಪಾತ್ರದ ಕೆಲವು ದೃಶ್ಯಗಳನ್ನು ರಜಪೂತರ ನಂಬಿಕೆಗಳಿಗೆ ಹಾಗೂ ಭಾವನೆಗಳಿಗೆ ಧಕ್ಕೆಯಾದಂತೆ ಚಿತ್ರಿಸಲಾಗಿದೆ ಎಂದು ಕರ್ಣಿಸೇನಾ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ರಾಣಿ ಲಕ್ಷ್ಮೀ ಬಾಯಿ ಪಾತ್ರದಲ್ಲಿ ನಟಿಸಿರುವ ನಟಿ ಕಂಗನಾ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಕರ್ಣಿಸೇನಾ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕುವ ಸಾಧ್ಯತೆ ಇದ್ದು, ಕಂಗನಾ ಮನೆಗೆ ಭದ್ರತೆಯನ್ನು ಒದಗಿಸಲಾಗಿದೆ.