ಪುತ್ತೂರು: ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಡೆದಿದೆ.
ಟ್ಯಾಂಕರ್ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ. ಯಾವುದೇ ರೀತಿಯಲ್ಲಿ ಅನಿಲ ಲೀಕೇಜ್ ಆಗದೆ ಅನಾಹುತ ತಪ್ಪಿದೆ.
ಎಂದಿನಂತೆ ವಾಹನ ಸಂಚಾರವೂ ಸುಗಮವಾಗಿದ್ದು, ಉಪ್ಪಿನಂಗಡಿ ಪೊಲೀಸರು ಅನಾಹುತವಾಗದಂತೆ ಮುಂಜಾಗೃತ ಕ್ರಮ ವಹಿಸಿದ್ದಾರೆ.