Wednesday, January 22, 2025
ಸುದ್ದಿ

ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ 3 ವಿದ್ಯಾರ್ಥಿಗಳು ಆಯ್ಕೆ – ಕಹಳೆ ನ್ಯೂಸ್

ನವದೆಹಲಿಯಲ್ಲಿ ಇಂದು ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ 3 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಸುರತ್ಕಲ್ ಗೋವಿಂದದಾಸ್ ಕಾಲೇಜಿನ ದ್ವಿತಿಯ ಬಿಕಾಂ ವಿದ್ಯಾರ್ಥಿನಿ ಕೃತಿ ವಿ. ರಾವ್, ಉಡುಪಿ ಎಂಜಿಎಂ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಚಿರಶ್ರೀ, ಎಸ್‌ಡಿಎಂ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೆಜ್ ಮೆಂಟ್‌ನ ದ್ವಿತೀಯ ಬಿಸಿಎ ವಿದ್ಯಾರ್ಥಿ ಆದಿತ್ಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾದವರು ಜನವರಿ ತಿಂಗಳು ಪೂರ್ತಿ ನವದೆಹಲಿಯಲ್ಲಿ ನಡೆದ ತರಬೇತಿಯಲ್ಲಿ ಭಾಗವಹಿಸಿದ ಅವರು, ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವವಿದ್ಯಾನಿಲಯ, ನಿರ್ದೇಶನಾಲಯದಿಂದ ಆಯ್ಕೆಯಾದ ಒಟ್ಟು 14 ಮಂದಿಯಲ್ಲಿ ಈ ಮೂರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರತಿನಿಧಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ ಬೆಂಗಳೂರಿನಲ್ಲಿ ನಡೆಯಲಿರುವ 2019 ರ ಗಣರಾಜ್ಯೋತ್ಸವ ದಿನದ ಪಥಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಮಂಗಳೂರು ಸ್ಕೂಲ್ ಆಫ್ ಸೋಶಿಯಲ್ ವರ್ಕ್ನ ದ್ವಿತೀಯ ಬಿಎ ವಿದ್ಯಾರ್ಥಿ ರಾಜ್ ಕಿಶನ್, ಪದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ ಮೆಂಟ್‌ನ ದ್ವಿತೀಯ ಬಿಕಾಂ ವಿದ್ಯಾರ್ಥಿ ವಿನಯಕುಮಾರ್, ಮಂಗಳೂರು ವಿವಿ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಚೈತ್ರ ಕೊಪ್ಪಳ ಆಯ್ಕೆಯಾಗಿದ್ದಾರೆ.

ಇವರು ಜನವರಿ 14 ರಿಂದ 27 ರವರೆಗೆ ಬಿ.ಎಂ.ಎಸ್.ಇಂಜಿನಿಯರಿಂಗ್ ಕಾಲೇಜು, ದೊಡ್ಡಬಸವನಗುಡಿ, ಬೆಂಗಳೂರು ಇಲ್ಲಿ ನಡೆದ ತರಬೇತಿಯಲ್ಲಿ ಭಾಗವಹಿಸಿ ಮಾಣಿಕ್ ಷಾ ಮೈದಾನದಲ್ಲಿ ಇಂದು ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ.