70 ನೇ ಗಣರಾಜ್ಯೋತ್ಸವ, ಸಾಲುಮರದ ತಿಮ್ಮಕ್ಕ ಸೇರಿದಂತೆ ಕರ್ನಾಟಕದ 5 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ – ಕಹಳೆ ನ್ಯೂಸ್
70 ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ 2019 ನೇ ಸಾಲಿನ ಪದ್ಮ ಪ್ರಶಸ್ತಿ ಘೋಷಣೆ ಮಾಡಲಾದ್ದು, ಸಾಲುಮರದ ತಿಮ್ಮಕ್ಕ ಸೇರಿದಂತೆ ಕರ್ನಾಟಕದ 5 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
ಕೇಂದ್ರ ಗೃಹ ಇಲಾಖೆ ಶುಕ್ರವಾರ ರಾತ್ರಿ 2019 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು. ವಿವಿಧ ಸಾಧಕರಿಗೆ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.
4 ಸಾಧಕರಿಗೆ ಪದ್ಮವಿಭೂಷಣ, 14 ಸಾಧಕರಿಗೆ ಪದ್ಮಭೂಷಣ, 94 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಕರ್ನಾಟಕ ಮೂಲದ ಐವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಭುದೇವ ಅವರಿಗೆ ಸಂಗೀತ,ನೃತ್ಯದಲ್ಲಿ, ರೋಹಿಣಿ ಗೋಡುಬಳೆ ವಿಜ್ಞಾನ ಇಂಜಿನಿಯರಿಂಗ್ ಕ್ಷೇತ್ರದಲ್ಲಿ, ಶಾರದಾ ಶ್ರೀನಿವಾಸನ್ ಪುರಾತತ್ವದಲ್ಲಿ, ರಾಜೀವ್ ತಾರಾನಾಥ್ ಸಂಗೀತ, ಕಲೆಗೆ, ಸಾಲುಮರದ ತಿಮ್ಮಕ್ಕ ಸಮಾಜ ಸೇವೆಯನ್ನ ಗುರುತಿಸಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.
ಇನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಐವರು ಸಾಧಕರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.