Tuesday, January 21, 2025
ಸುದ್ದಿ

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು 12 ನೇ ತರಗತಿಯವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ – ಕಹಳೆ ನ್ಯೂಸ್

ಇದೀಗ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ, ಹೌದು 1 ನೇ ತರಗತಿಯಿಂದ 8 ನೇ ತರಗತಿವರೆಗಿನ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಶಿಕ್ಷಣ ಹಕ್ಕು ಕಾಯ್ದೆಯನ್ನು 12 ನೇ ತರಗತಿಯವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತಿಸಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಆರ್.ಟಿ.ಇ. ಕಾಯ್ದೆಯನ್ನು 12 ನೇ ತರಗತಿಯವರೆಗೆ ವಿಸ್ತರಿಸುವ ಪ್ರಸ್ತಾವವಿದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರ್.ಟಿ.ಇ. ಕಾಯ್ದೆಯ ಪ್ರಕಾರ, ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಶೇ. 25 ರಷ್ಟು ಸೀಟುಗಳನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳಿಗೆ ಮೀಸಲಿಡಬೇಕು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದನ್ನು 12 ನೇ ತರಗತಿಯವರೆಗೆ ವಿಸ್ತರಿಸಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.