Sunday, January 19, 2025
ರಾಜಕೀಯಸುದ್ದಿ

ಶಾಸಕ ಆನಂದ್ ಸಿಂಗ್ ಭೇಟಿಯಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ – ಕಹಳೆ ನ್ಯೂಸ್

ಜನವರಿ 19ರ ಶನಿವಾರ ರಾತ್ರಿ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್‍ನಲ್ಲಿ ಕಂಪ್ಲಿ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಮತ್ತು ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ನಡುವೆ ಗಲಾಟೆ ನಡೆದಿತ್ತು. ಜೆ.ಎನ್.ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದರು.

ಆನಂದ್ ಸಿಂಗ್ ಅವರ ಕಣ್ಣಿಗೆ ಪೆಟ್ಟುಬಿದ್ದಿದ್ದು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಆನಂದ್ ಸಿಂಗ್ ಭೇಟಿ ಮಾಡಿದರು. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಬಂಧನ ಭೀತಿಯಿಂದಾಗಿ ಅವರು ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.