Sunday, January 19, 2025
ರಾಜಕೀಯಸುದ್ದಿ

‘ಸಿದ್ದಗಂಗಾ ಶ್ರೀ’ಗಳನ್ನು ಸ್ಮರಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳನ್ನ ಪ್ರಧಾನಿ ಮೋದಿ ‘ಮನ್ ಕಿ ಬಾತ್’ ನಲ್ಲಿ ಸ್ಮರಿಸಿದ್ದಾರೆ. ಸಿದ್ದಗಂಗಾ ಶ್ರೀಗಳು 111 ವರ್ಷ ಜೀವನ ನಡೆಸಿದ್ದು, ಅಪಾರ ಸಂಖ್ಯೆಯ ಮಕ್ಕಳ ಬದುಕಿಗೆ ಬೆಳಕಾಗಿದ್ದರು. ತಮ್ಮ ಜೀವನವನ್ನು ಮಕ್ಕಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಉದ್ಧಾರಕ್ಕೆ ಶ್ರಮಿಸಿದ್ದರು.
ಸಿದ್ಧಗಂಗಾ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಬಸವಣ್ಣ ಕಾಯಕ ಕೈಲಾಸ ಎಂದು ಹೇಳಿದ್ದರು. ಅದೇ ರೀತಿ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಇಡೀ ಜೀವನವನ್ನೇ ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದರು ಎಂದು ‘ಮನ್ ಕಿ ಬಾತ್’ ನಲ್ಲಿ ಸ್ಮರಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು