ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಚಾಲನೆ ನೀಡಲು ಫೆ.10 ರಂದು ಬೆಳಗಾವಿಗೆ ಬರುತ್ತಾರೆ.
ಲೋಕಸಭಾ ಚುನಾವಣ ಪ್ರಚಾರ ಬೆಳಗಾವಿಯಿಂದಲೇ ಪ್ರಧಾನಿ ಆರಂಭಿಸಲಿದ್ದಾರೆ. ಬೆಳಗಾವಿಯಲ್ಲಿ ಪ್ರಧಾನಿ ಅವರ ಸಮಾವೇಶಕ್ಕೆ ಸ್ಥಳ ಆಯ್ಕೆ ಮಾಡಿ ಸಿದ್ದತೆ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ಥಳೀಯ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಸೂಚನೆಯಂತೆ ಪ್ರಧಾನಿ ಮೋದಿ ಆಗಮನಕ್ಕೆ ಸಿದ್ಧತೆಗಳು ನಡೆದಿವೆ ಎಂದು ಸಂಸದ ಸುರೇಶ್ ಅಂಗಡಿ ಹೇಳಿದ್ದಾರೆ.