Monday, January 20, 2025
ಸುದ್ದಿ

ಶ್ರೀರಾಂಪುರ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್‌ನಿಂದ ಬಿದ್ದಿದ್ದ ಮಗು ಸಾವು – ಕಹಳೆ ನ್ಯೂಸ್

ಬೆಂಗಳೂರು: ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ರೈಲ್ವೆ ಹಳಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ.

ಅಜ್ಜಿ ಮತ್ತು ತಾಯಿ ಜೊತೆಗಿದ್ದ ಒಂದೂವರೆ ವರ್ಷದ ಮಗು ಎಸ್ಕಲೇಟರ್‌ನಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹರಿಣಿ ಗಾಯಗೊಂಡಿರುವ ಮಗು, ಮೆಟ್ರೋ ಸಿಬ್ಬಂದಿ ಮತ್ತು ಪೋಷಕರು ಮಗುವನ್ನು ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹರಿಣಿ ತಾಯಿ ಮತ್ತು ಅಜ್ಜಿಯ ಜೊತೆ ಮೆಟ್ರೋ ರೈಲು ಹತ್ತುವ ಸಲುವಾಗಿ ಎಸ್ಕಲೇಟರ್‌ನಲ್ಲಿ ಹೋಗುವಾಗ ಆಯತಪ್ಪಿ ಮಗು ಕೆಳಗೆ ಬಿದ್ದಿದೆ ಎಸ್ಕಲೇಟರ್‌ನಿಂದ ಕೆಳಗೆ ಉರುಳಿ ನೆಲಕ್ಕೆ ಮಗು ಬಿದ್ದಿದ್ದು ತಕ್ಷಣ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸಿಬ್ಬಂದಿಯೇ ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಸುಬ್ರಹ್ಮಣ್ಯನಗರ ಪೊಲೀಸರು ಮಾಹಿತಿ ನೀಡಿದ್ದಾರೆ.