Friday, January 24, 2025
ಸುದ್ದಿ

ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ನೀಡದೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ: ವಾಟಾಳ್ ನಾಗರಾಜ್ – ಕಹಳೆ ನ್ಯೂಸ್

ಕಾಯಕಯೋಗಿ, ತ್ರಿವಿಧ ದಾಸೋಹಿ, 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಅಂಗೈಯಲ್ಲಿಟ್ಟುಕೊಂಡು ಅಕ್ಷರ, ಅನ್ನ, ಆಶ್ರಯ ನೀಡಿ ಪೋಷಿಸುತ್ತಿದ್ದ ತುಮಕೂರಿನ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತರತ್ನ ನೀಡದೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಸಂಬಂಧ ವ್ಯರ್ಥ ಪ್ರಲಾಪ ಮಾಡುತ್ತಿದ್ದಾರೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದರು.

ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ.ಗೋವಿಂದ್ ಸೇರಿದಂತೆ ಇನ್ನಿತರರೊಂದಿಗೆ ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ನಡೆಸಿದ ಅವರು, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಅತ್ಯಮೂಲ್ಯ ಸೇವೆ ಸಲ್ಲಿಸಿದ್ದ ಸಿದ್ದಗಂಗಾ ಶ್ರೀಗಳ ಸೇವೆ ಪರಿಗಣಿಸಿ ಭಾರತ ರತ್ನ ನೀಡದ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಸೇರಿದಂತೆ ಹಲವೆಡೆ ವ್ಯರ್ಥ ಪ್ರಲಾಪ ಭಾಷಣಗಳನ್ನು ಮಾಡುತ್ತಿದ್ದಾರೆ. ಇದರಿಂದ ಶ್ರೀಗಳ ಸೇವೆಗೆ ಗೌರವ ದೊರೆಯುವುದಿಲ್ಲ. ಅವರಿಗೆ ಭಾರತರತ್ನ ದೊರೆಯಬೇಕು ಎಂದು ಆಗ್ರಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು