Thursday, January 23, 2025
ಸುದ್ದಿ

ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ವಿಧಾನಸೌಧಕ್ಕೆ ಮಹಿಳೆಯರಿಂದ ಮುತ್ತಿಗೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹಿಸಿ ಜನವರಿ 19 ರಂದು ಚಿತ್ರದುರ್ಗದಿಂದ ಮಹಿಳೆಯರು ಪಾದಯಾತ್ರೆ ಹೊರಟಿದ್ದು, ಬೆಂಗಳೂರಿನ ಮಲ್ಲೇಶ್ವರಂ ಮೈದಾನದಲ್ಲಿ ವಾಸ್ತವ್ಯ ಹೂಡಿದ್ದಾರೆ. ಮದ್ಯ ನಿಷೇಧಕ್ಕೆ ಆಗ್ರಹಿಸಿ ಚಿತ್ರದುರ್ಗದಿಂದ ಪಾದಯಾತ್ರೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಮಹಿಳೆಯರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.

ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ ಮಹಿಳೆಯರು ಚಿತ್ರದುರ್ಗದಿಂದ ಪಾದಯಾತ್ರೆ ಹೊರಟು 11 ನೇ ದಿನಕ್ಕೆ ಬೆಂಗಳೂರು ತಲುಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಲ್ಲೇಶ್ವರಂ ಮೈದಾನದಿಂದ ವಿಧಾನಸೌಧದವರೆಗೆ ರ್ಯಾಲಿ ನಡೆಸಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು. ಸಮಾಜದ ಸ್ವಾಸ್ಥ್ಯ ಕಾಪಾಡಲು ರಾಜ್ಯಾದ್ಯಂತ ಸಂಪೂರ್ಣ ಮದ್ಯ ನಿಷೇಧಿಸಬೇಕು ಎಂದು ಒತ್ತಾಯಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಾರ ಸಂಖ್ಯೆಯ ಮಹಿಳೆಯರು ಕೈಗೊಂಡಿರುವ ವಿಧಾನಸೌಧ ಮುತ್ತಿಗೆ ಹೋರಾಟದಲ್ಲಿ ಸ್ವಾತಂತ್ರ ಹೋರಾಟಗಾರರು, ಚಿಂತಕರು ಭಾಗಿಯಾಗಲಿದ್ದಾರೆ.