Saturday, November 23, 2024
ಸುದ್ದಿ

ರಾಮಮಂದಿರ ನಿರ್ಮಾಣಕ್ಕೆ ಫೆ. 21 ರಂದು ಅಡಿಗಲ್ಲು – ಕಹಳೆ ನ್ಯೂಸ್

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಮಮಂದಿರ ನಿರ್ಮಾಣಕ್ಕೆ ಫೆ. 21 ರಂದು ಅಡಿಗಲ್ಲು ಹಾಕುವುದಾಗಿ ಪರಮ ಧರ್ಮ ಸಂಸದ್ ಸಂಘಟನೆ ಘೋಷಿಸಿದೆ.

ಅಯೋಧ್ಯಾದಲ್ಲಿರುವ ವಿವಾದ ರಹಿತ ಭೂಮಿಯನ್ನು ಅದರ ಹಕ್ಕಿನ ಮಾಲೀಕರಾದ ರಾಮ ಜನ್ಮಭೂಮಿ ನ್ಯಾಸ್‌ಗೆ ಹಸ್ತಾಂತರ ಮಾಡುವ ಸಂಬಂಧ ಎನ್‌ಡಿಎ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದ ಬೆನ್ನಲ್ಲೇ ಬುಧವಾರ ಮುಕ್ತಾಯಗೊಂಡ ಮೂರು ದಿನಗಳ ಧರ್ಮ ಸಂಸದ್‌ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಯಾಗ್ ರಾಜ್‌ನಲ್ಲಿ ಸಾಧುಗಳ ಬೃಹತ್ ಸಮ್ಮೇಳನದಲ್ಲಿ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಅವರು ಅಯೋಧ್ಯಾದಲ್ಲಿ ಫೆ.21 ರಂದು ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಮುನ್ನ ಮೆರವಣಿಗೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಾವು ಸುಪ್ರೀಂಕೋರ್ಟ್ನ ಯಾವುದೇ ಆದೇಶವನ್ನು ಉಲ್ಲಂಘನೆ ಮಾಡುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಹೈಕೋರ್ಟ್ನ ಆದೇಶವನ್ನು ಸುಪ್ರೀಂಕೋರ್ಟ್ ವಜಾಗೊಳಿಸುವವರೆಗೂ ಅದು ಚಾಲ್ತಿಯಲ್ಲಿರುತ್ತದೆ ಎಂದ ಅವರು, ದೇಶದೆಲ್ಲೆಡೆ ಇರುವ ಹಿಂದೂಗಳು ಈ ಚಳವಳಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಸೋಮವಾರ ಮನವಿ ಮಾಡಿದೆ.