Recent Posts

Monday, January 20, 2025
ಸುದ್ದಿ

ಸಜೀಪ ಮುನ್ನೂರು ಗ್ರಾಮಸ್ಥರಿಗೆ ಶುದ್ಧ ನೀರಿನ ಅಭಾವ: ಗ್ರಾಮಸ್ಥರಿಂದ ಆರೋಪ – ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ 3ನೆ ಬ್ಲಾಕ್‌ನಲ್ಲಿರುವ ನೀರು ಶುದ್ಧೀಕರಣ ಘಟಕವು ಹಾಳಾಗಿದ್ದು, ನೇರವಾಗಿ ನದಿಯ ಮೂಲಕವೇ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಕುಡಿಯಲು ಅಯೋಗ್ಯವಾಗಿದ್ದು, ಇದರಿಂದ ಜನರು ರೋಗದ ಭೀತಿ ಎದುರಿಸುತ್ತಿದ್ದಾರೆ ಎಂದು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.

ನಿನ್ನೆ ಬಿ.ಸಿ.ರೋಡಿನ ಪ್ರಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಸಜೀಪಮುನ್ನೂರು ಗ್ರಾಪಂ ಸದಸ್ಯ ಹಂಝ ಮಾತನಾಡಿ, ಜಿಲ್ಲಾ ಪಂಚಾಯತ್ ಅನುದಾನದಡಿ ಸುಮಾರು 28 ಲಕ್ಷ ರೂ. ವೆಚ್ಚದಲ್ಲಿ ಸಜೀಪ ಮುನ್ನೂರು ಗ್ರಾಮದಲ್ಲಿ ನೀರು ಶುದ್ಧೀಕರಣ ಘಟಕವನ್ನು ನಿರ್ಮಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅದಲ್ಲದೆ, ಇದರ ಕಾಮಗಾರಿ ಕಳಪೆ ಹಾಗೂ ಅಪೂರ್ಣವಾಗಿದ್ದು, ಕಳೆದ 8 ತಿಂಗಳಿಂದ ಘಟಕವು ಕಾರ್ಯನಿರ್ವಸುತ್ತಿಲ್ಲ. ಇದರಿಂದ ಜನರಿಗೆ ಕುಡಿಯಲು ನೇರವಾಗಿ ನದಿಯಿಂದಲೇ ನೀರು ಪೂರೈಕೆ ಮಾಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನೀರು ಕಲುಷಿತವಾಗಿದ್ದು, ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ. ಇದರಿಂದ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಅಭಾವ ಉಂಟಾಗಿದೆ ಎಂದು ಅವರು ಆರೋಪಿಸಿದ್ದಾರೆ.