ಬಂಟ್ವಾಳ: ಜಿ.ಪಂ.ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಚ ಭಾರತ ಮಿಷನ್(ಗ್ರಾ) ಕಾರ್ಯಕ್ರಮದಡಿ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ಫೆ.2 ರಂದು ” ನಮ್ಮ ತ್ಯಾಜ್ಯ ನಮ್ಮ ಹೊಣೆ” ಪರಿಕಲ್ಪನೆಯಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ತರಭೇತಿ ಕಾರ್ಯಗಾರ ನಡೆಯಿತು.
ಈ ಸಂದರ್ಭದಲ್ಲಿ ತಾ.ಪಂ ಅದ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅದ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಇಒ ರಾಜಣ್ಣ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ಮತ್ತು ತ್ಯಾಜ್ಯ ಗಳ ಸಮಗ್ರ ನಿರ್ವಹಣೆ ಯ ದ್ರಷ್ಟಿಯಿಂದ ತರಬೇತಿ ಕಾರ್ಯಕ್ರಮ ವನ್ನು ಆಯೋಜಿಸಲಾಗಿದ್ದು ಈ ಕಾರ್ಯಗಾರದಲ್ಲಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷ ರು, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರು, ತಾ.ಪಂ.ಸದಸ್ಯ ರು, ಜಿ.ಪಂ.ಸದಸ್ಯರು, ಪಂ.ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಯ ಅಧಿಕಾರಿಗಳು ಭಾಗವಹಿಸಿದ್ದರು.