ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಇಂದು ಬೆಳಿಗ್ಗೆ ಬೆಂಗಳೂರಿನ ತಮ್ಮ ಪದ್ಮನಾಭನಗರ ನಿವಾಸದ ಬಾತ್ ರೂಮಿನಲ್ಲಿ ಕಾಲು ಜಾರಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿದ್ದ ಪರಿಣಾಮ ಅವರ ಕಾಲಿಗೆ ಗಾಯವಾಗಿದೆ ಎಂದು ಹೇಳಲಾಗಿದ್ದು, ಕೂಡಲೇ ನಿವಾಸಕ್ಕೆ ಆಗಮಿಸಿದ ವೈದ್ಯರು ಎಕ್ಸರೇ ಮಾಡಿಸುವುದು ಸೂಕ್ತ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.
ದೇವೇಗೌಡರ ಬಲಗಾಲಿನ ಮೂಳೆಗೆ ಏಟು ಬಿದ್ದಿದೆ ಎಂದು ಹೇಳಲಾಗಿದ್ದು, ಎಕ್ಸರೇ ಬಳಿಕ ಸ್ಪಷ್ಟ ಮಾಹಿತಿ ಸಿಗಲಿದೆ.