Recent Posts

Tuesday, April 22, 2025
ಸುದ್ದಿ

ಕೇರಳಕ್ಕೆ ಮರಳು ಸಾಗಾಟ ಮಾಡುತ್ತಿದ್ದ 4 ಟಿಪ್ಪರ್ ಪೊಲೀಸ್ ವಶ – ಕಹಳೆ ನ್ಯೂಸ್

ಮಂಗಳೂರು: ನಗರದ ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರೌಡಿ ಹಾಗೂ ರೌಡಿ ನಿಗ್ರಹದಳದ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಕೇರಳ ರಾಜ್ಯಕ್ಕೆ ಮರಳು ಸಾಗಾಟ ಮಾಡುತ್ತಿದ್ದ 4 ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮರಳು ಸಮೇತ ಟಿಪ್ಪರ್ ಲಾರಿಗಳನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 70 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ, ರೌಡಿ ನಿಗ್ರಹದಳ ಹಾಗೂ ಕೊಣಾಜೆ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ