ಕಾಂಗ್ರೆಸ್ ಶಾಸಕರು ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಆದರೆ ಬಿಜೆಪಿ ಶಾಸಕರು ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ದೊಡ್ಡ ಮಟ್ಟದಲ್ಲಿ ಸಂಪರ್ಕದಲ್ಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಬಗ್ಗೆ ನಮಗೆ ಯಾವುದೇ ಭೀತಿ ಇಲ್ಲ. ಅವರು ಕಳೆದ ಎಂಟು ತಿಂಗಳಿಂದ ಈ ಪ್ರಯತ್ನ ಮಾಡುತ್ತಿದ್ದಾರೆ.
ಪ್ರಜಾಪ್ರಭುತ್ವದ ವಿರುದ್ಧ ಅವರ ವರ್ತನೆ ಇದೆ. ಅವರಿಗೆ ಸ್ಪಷ್ಟ ಬಹುಮತ ಇಲ್ಲ. ಸಮ್ಮಿಶ್ರ ಸರ್ಕಾರಕ್ಕೆ ಸ್ಪಷ್ಟ ಬಹುಮತ ಇದೆ. ಸರ್ಕಾರಕ್ಕೆ ಅವರು ಸಹಕಾರ ನೀಡುವುದನ್ನು ಬಿಟ್ಟು ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ. ಇದು ಅಸಾಂವಿಧಾನಿಕ ಎಂದು ಅಭಿಪ್ರಾಯಪಟ್ಟರು.