ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ಬಿಸಿಯೂಟ ತಯಾರಿಸುವ ಮಹಿಳೆಯರಿಗೆ ಯಾವುದೇ ಯೋಜನೆಯನ್ನು ಜಾರಿಗೆ ತಂದಿಲ್ಲ. ಮಹಿಳೆಯರ ಬಗ್ಗೆ ಅತ್ಯಂತ ಕಾಳಜಿ ವಹಿಸುವ ಮೋದಿಯವರು ಬಿಸಿಯೂಟ ತಯಾರಿಸುವ ಮಹಿಳೆಯರನ್ನು ಕಡೆಗಣಿಸಿದ್ದಾರೆ ಎಂದು ಸಿಐಟಿಯು ಅಧ್ಯಕ್ಷೆ ಪದ್ಮಾವತಿ ಶೆಟ್ಟಿ ಹೇಳಿದರು.
ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್‍ನಲ್ಲಿ ಬಿಸಿಯೂಟ ತಯಾರಿಸುವ ಮಹಿಳಾ ಕಾರ್ಮಿಕರಿಗೆ ವೇತನ ಏರಿಕೆ ಮಾಡದಿರುವುದನ್ನು ವಿರೋಧಿಸಿ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಹಾಗೂ ಸಿಐಟಿಯು ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಇಂದು ಬೆಳಗ್ಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.