ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು ಚರ್ಚೆಯಲ್ಲಿ ಪಾಲ್ಗೊಂಡಿದ್ದ ದೇವೇಗೌಡರು ಭಾವುಕರಾಗಿ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಸುಳಿವು ನೀಡಿದ್ದಾರೆ.
ಕಳೆದ 57 ವರ್ಷಗಳಿಂದ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯವಾಗಿರುವ ನನಗೆ ಲೋಕಸಭೆಯಲ್ಲಿ ಇದು ಕೊನೆಯ ಭಾಷಣ ಆಗಬಹುದು ಎಂದು ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.
ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ. ಹಾಸನ ಲೋಕಸಭೆ ಕ್ಷೇತ್ರದಿಂದ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಖಚಿತವಾಗಿದೆ.
57 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ನನಗೆ ಲೋಕಸಭೆಯಲ್ಲಿ ಇದು ಕೊನೆಯ ಭಾಷಣ ಆಗಬಹುದು ಎಂದು ಅವರು ಹೇಳಿದ್ದಾರೆ.
ಮೈತ್ರಿ ಸರ್ಕಾರಗಳಲ್ಲಿ ಸುಗಮ ಆಡಳಿತಕ್ಕೆ ಅಡೆತಡೆ ಜಾಸ್ತಿ ಎಂಬ ಬಿಜೆಪಿ ವಾದವನ್ನು ತಳ್ಳಿಹಾಕಿದ ಅವರು, ದೋಸ್ತಿ ಸರ್ಕಾರ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂಬುದಕ್ಕೆ ನಾನೇ ಉದಾಹರಣೆ ಎಂದು ಹೇಳಿದ್ದಾರೆ.