ಮಂಗಳೂರು: ನಗರದ ಮೋರ್ಗನ್ಸ್ ಗೇಟ್ ಬಳಿಯ ಕಾಲ್ ಸೆಂಟರ್ ಉದ್ಯೋಗಿಯೊಬ್ಬರು ಶನಿವಾರ ರಾತ್ರಿ ಪಡೀಲ್ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೂಲತಃ ಬರ್ಕೆ ನಿವಾಸಿ ಪ್ರಸ್ತುತ ಪಡೀಲ್ ಸಮೀಪದ ಕರ್ಮಾರ್‍ನಲ್ಲಿ ವಾಸವಾಗಿರುವ ದೀಪಕ್ ಬರ್ಕೆ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.