Saturday, November 23, 2024
ಸುದ್ದಿ

ಗ್ರಾಮೀಣ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಬೇಕು: ಡಾ.ಪೀಟರ್ – ಕಹಳೆ ನ್ಯೂಸ್

ಪುತ್ತೂರು: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಭವಿಷ್ಯದ ಬಗೆಗೆ ಸರಿಯಾದ ಮಾರ್ಗದರ್ಶನ ಸಿಕ್ಕಾಗ ಅವರು ಉತ್ಕøಷ್ಟ ರೀತಿಯಲ್ಲಿ ಬೆಳೆಯುವುದಕ್ಕೆ ಸಾಧ್ಯ. ಅನೇಕ ಮಂದಿ ಹೆತ್ತವರಿಗೂ ಸಾಧ್ಯತೆಗಳ ಅರಿವಿರುವುದಿಲ್ಲ. ಹಾಗಾಗಿ ಒಳ್ಳೆಯ ರೀತಿಯಲ್ಲಿ ಮಾಹಿತಿ ದೊರೆತಾಗ ತಮ್ಮ ಮಕ್ಕಳಿಗೆ ಏನು ಓದಿಸಬೇಕೆಂಬ ಕಲ್ಪನೆ ಅವರಲ್ಲೂ ಮೂಡುತ್ತದೆ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗ ಹಾಗೂ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯಲ್ಲಿ ನಡೆದ ‘ವಿಜ್ಞಾನ ಜಾಗೃತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಕ್ಕಳಲ್ಲಿನ ಪ್ರತಿಭೆಗಳು ಹೊರಬರಬೇಕಾದರೆ ಅದನ್ನು ಗುರುತಿಸುವವರು ಸಿಗಬೇಕು. ಪುತ್ತೂರು ಪರಿಸರದಲ್ಲಿ ಅಂತಹ ಕಾರ್ಯವನ್ನು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ರಸಾಯನಶಾಸ್ತ್ರ ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳು ಬೇರೆ ಬೇರೆ ಕಡೆಗಳಲ್ಲಿ ಹೋಗಿ ತಾವು ಕಲಿತ ಕೆಲವು ವಿಷಯವನ್ನು ಪ್ರೌಢಶಾಲೆ ಮಕ್ಕಳಿಗೆ ತಿಳಿಸಿ ಕೊಡುತ್ತಿದ್ದಾರೆ. ಚಿಕ್ಕವಯಸ್ಸಿನಲ್ಲಿ ಮಕ್ಕಳಿಗೆ ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳು ಕಷ್ಟಕರ ಎನಿಸುತ್ತವೆ. ಆದರೆ ಆ ಬಗೆಗಿನ ಮಾಹಿತಿ ಅವರಲ್ಲಿನ ಭಯ ಹೋಗಲಾಡಿಸುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಮಕೃಷ್ಣ ಪ್ರೌಢಶಾಲೆ ಆಡಳಿತ ಮಂಡಳಿ ಸಂಚಾಲಕ ಕಾವು ಹೇವiನಾಥ ಶೆಟ್ಟಿ, ವಿಜ್ಞಾನದ ಕುರಿತಾಗಿ ಒಳ್ಳೆಯ ವಿಚಾರವನ್ನು ವಿವೇಕಾನಂದ ರಸಾಯನಶಾಸ್ತ್ರದ ವಿದ್ಯಾರ್ಥಿಗಳು ತಿಳಿಸಿಕೊಡುತ್ತಿದ್ದಾರೆ. ಮಕ್ಕಳು ಇದರ ಸದುಪಯೋಗಪಡಿಸಿಕೊಂಡಾಗ ಮಾತ್ರ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಮಕ್ಕಳಿಗಾಗಿ ಮತ್ತೆ ಮತ್ತೆ ವಿಜ್ಞಾನ ಕಾರ್ಯಗಾರಗಳು ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭಾಗಿಯಾಗಿ ರಾಷ್ಟೀಯ ಜಂತುಹುಳು ದಿನಾಚಾರಣೆಯ ಪ್ರಯುಕ್ತ ಮಕ್ಕಳಿಗೆ ಮಾತ್ರೆಯನ್ನು ನೀಡುವ ಮೂಲಕ ಆರೋಗ್ಯ ಕಾಪಾಡುವಂತೆ ಸೂಚನೆ ನೀಡಿದರು.

ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ.ವಿ.ಆರ್ ಕಾರಂತ್ ಪ್ರಸ್ತಾವನೆಗೈದರು. ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ರೂಪಕಲಾ ಕೆ. ಸ್ವಾಗತಿಸಿ, ಶಿಕ್ಷಕಿ ದೀಪ್ತಿ ವಂದಿಸಿದರು. ಶಿಕ್ಷಕಿ ಪ್ರೀತಾ ಎನ್ ಕಾರ್ಯಕ್ರಮ ನಿರೂಪಿಸಿದರು.