Sunday, November 24, 2024
ಸುದ್ದಿ

ಶಿಕ್ಷಕರ ವರ್ಗಾವಣೆಯ ಕನಿಷ್ಠ ಮಿತಿಯನ್ನು 5 ವರ್ಷದಿಂದ 3 ವರ್ಷಕ್ಕೆ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಶಿಕ್ಷಕರ ವರ್ಗಾವಣೆಯ ಕನಿಷ್ಠ ಮಿತಿಯನ್ನು 5 ವರ್ಷದಿಂದ 3 ವರ್ಷಕ್ಕೆ ಇಳಿಸಲಾಗಿದೆ. ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ 2018 ನ್ನು ಅಂಗೀಕರಿಸಲಾಗಿದೆ. ಅದರಂತೆ ಶಿಕ್ಷಕರ ವರ್ಗಾವಣೆ ಕನಿಷ್ಠ ಮಿತಿ 5 ವರ್ಷದಿಂದ 3 ವರ್ಷಕ್ಕೆ ಇಳಿಸಲಾಗಿದೆ.

ಶಿಕ್ಷಕರು ವರ್ಗಾವಣೆಗೊಳ್ಳಲು ಹಾಲಿ ಸ್ಥಳದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಬೇಕೆಂಬ ನಿಯಮ ಇದೆ. ಇದನ್ನು ಸಡಿಲಿಸಿ 3 ವರ್ಷಕ್ಕೆ ಇಳಿಸಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಪತಿ, ಪತ್ನಿ ಪ್ರಕರಣದಲ್ಲಿ ಯಾರಿಗಾದರೂ ಗಂಭೀರವಾದ ಕಾಯಿಲೆ ಇದ್ದರೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ಪಡೆದು ಒಂದೇ ಸ್ಥಳಕ್ಕೆ ನಿಯುಕ್ತಿ ಮಾಡಿಸಿಕೊಳ್ಳಬಹುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಕ್ಷಕ ಅಥವಾ ಶಿಕ್ಷಕಿಯ ಸಂಗಾತಿ ಸರ್ಕಾರಿ, ಸಾರ್ವಜನಿಕ ಸ್ವಾಮ್ಯದ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದರೆ ಅಂತಹ ಸ್ಥಳಗಳಿಗೆ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ಮಕ್ಕಳಿಗೆ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆ ಇದ್ದರೆ ವರ್ಗಾವಣೆಯಿಂದ ವಿನಾಯಿತಿ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.