Sunday, November 24, 2024
ಸುದ್ದಿ

ಕೇಂದ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಕೊಡುಗೆ – ಕಹಳೆ ನ್ಯೂಸ್

ಇತ್ತೀಚೆಗಷ್ಟೇ ಸರ್ಕಾರಿ ನೌಕರರಿಗೆ ಕೆಲ ಸೌಲಭ್ಯಗಳನ್ನು ನೀಡಿದ್ದ ಕೇಂದ್ರ ಸರ್ಕಾರ ಈಗ ಮತ್ತೊಂದು ಕೊಡುಗೆಯನ್ನು ಘೋಷಿಸಿದ್ದು, ಇದು ಈಶಾನ್ಯ ರಾಜ್ಯಗಳು, ಅಂಡಮಾನ್-ನಿಕೋಬಾರ್ ಹಾಗೂ ಜಮ್ಮು-ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಅನ್ವಯವಾಗಲಿದೆ.

ಈ ರಾಜ್ಯಗಳ ನೌಕರರು ಈ ಹಿಂದೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಮಾತ್ರ ಹೋಗಬೇಕಾಗಿತ್ತು. ಇದರಿಂದ ನೌಕರರುಗಳಿಗೆ ತೊಂದರೆಯಾಗುತ್ತಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಈ ನಿಯಮಾವಳಿಯನ್ನು ಬದಲಾಯಿಸಲಾಗಿದ್ದು, ನೌಕರರು ಖಾಸಗಿ ವಿಮಾನದಲ್ಲೂ ಪ್ರಯಾಣಿಸಲು ಅನುವು ಮಾಡಿಕೊಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಡಾ. ಜಿತೇಂದ್ರ ಸಿಂಗ್ ಈ ಮಾಹಿತಿ ನೀಡಿದ್ದು, ಏಳನೇ ವೇತನ ಆಯೋಗದ ಶಿಫಾರಸ್ಸಿನಂತೆ ಈ ಯೋಜನೆ ಜಾರಿಗೆ ತಂದಿರುವುದಾಗಿ ತಿಳಿಸಿದ್ದಾರೆ.