ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ವಾಹನ ತಪಾಸಣೆ ಮಾಡುತ್ತಿರುವ ಸಮಯ ಬಿ.ಸಿ. ರೋಡ್ ಕಡೆಯಿಂದ ಪಡೀಲ್ ಮಾರ್ಗವಾಗಿ ಬರುತ್ತಿದ್ದ ಲಾರಿಗಳಲ್ಲಿ ಮರಳನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೇರಳ ರಾಜ್ಯಕ್ಕೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ, ಮುಂದಿನ ಸೂಕ್ತ ಕಾನೂನು ಕ್ರಮಕ್ಕಾಗಿ ಉಪ ನಿರ್ದೇಶಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಂಗಳೂರುರವರಿಗೆ ಹಸ್ತಾಂತರಿಸಲಾಗಿದೆ.
ಸ್ವಾಧೀನ ಪಡಿಸಿಕೊಂಡ ಮರಳು ಮತ್ತು ಲಾರಿಯ ಮೌಲ್ಯ ಒಟ್ಟು ರೂ. 36,50,000/- ಎಂದು ಅಂದಾಜಿಸಲಾಗಿದೆ.
ಕಂಕನಾಡಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾದ ಅಶೋಕ್ ಪಿ. ಹಾಗೂ ಪಿ.ಎಸ್.ಐ. ರವರಾದ ಪ್ರದೀಪ್ ಟಿ. ಆರ್. ಮತ್ತು ಸಿಸಿಬಿ ಘಟಕದ ಪಿ.ಎಸ್.ಐ. ರವರಾದ ಕಬ್ಬಾಳ್ ರಾಜ್ ಮತ್ತು ಠಾಣಾ ಸಿಬ್ಬಂದಿಗಳು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.