Sunday, November 24, 2024
ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು: ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಮತ್ತು ಸಿಸಿಬಿ ಘಟಕದ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದ ವೆಲೆನ್ಸಿಯಾ ಸ್ಟೇಟ್ ಬ್ಯಾಂಕ್ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯಾದ ಪ್ರೀತಂ .ಜೆ (31) ವೆಲೆನ್ಸಿಯಾ ಉಜ್ಜೋಡಿ ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಸದ್ರಿ ಆರೋಪಿತನಿಂದ ಸುಮಾರು 260 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪೋನನ್ನು ವಶಪಡಿಸಿದ್ದು ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 90220/- ಎಂದು ಅಂದಾಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಎಕಾನಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಕೃಷ್ಣ ಕೆ.ಕೆ., ಮತ್ತು ಸಿಬ್ಬಂದಿಗಳು ಹಾಗೂ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶಾಂತರಾಮ ಮತ್ತು ಉಪ- ನಿರೀಕ್ಷಕರಾದ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ._

ಜಾಹೀರಾತು
ಜಾಹೀರಾತು
ಜಾಹೀರಾತು