Saturday, September 21, 2024
ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ಮತ್ತೊಬ್ಬಾತನ ಬಂಧನ – ಕಹಳೆ ನ್ಯೂಸ್

ಮಂಗಳೂರು: ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣಾ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಮಂಗಳೂರು ನಗರದ ಪಂಜಿಮೊಗರು ವಿವೇಕನಗರ ಸಾರ್ವಜನಿಕ ರಸ್ತೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯಾದ ಸನತ್ ರಾವ್ (22) ಪಂಜಿಮೊಗರು ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ರಿ ಆರೋಪಿತನಿಂದ ಸುಮಾರು 104 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವನ್ನು ವಶಪಡಿಸಿದ್ದು ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 35250/- ಎಂದು ಅಂದಾಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಇಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

ಜಾಹೀರಾತು