Recent Posts

Sunday, January 19, 2025
ಸುದ್ದಿ

ಮಂಗಳೂರಿನಲ್ಲಿ ಪಾಸ್ ಪೋರ್ಟ್ ಹರಿದ ಆರೋಪ ಹಿನ್ನೆಲೆ: ತನಿಖೆ ನಡೆಸಲು ಆದೇಶಿಸಿದ ವಸಮ್ ವೆಂಕಟೇಶ್ವರ ರಾವ್ – ಕಹಳೆ ನ್ಯೂಸ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಹಿಳೆಯೊಬ್ಬರ ಪಾಸ್ ಪೋರ್ಟ್ ಹರಿದು ಹಾಕಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ವಿಮಾನ ನಿಲ್ದಾಣದ ನಿರ್ದೇಶಕ ವಸಮ್ ವೆಂಕಟೇಶ್ವರ ರಾವ್ ಆದೇಶಿಸಿದ್ದಾರೆ.

ಮಂಗಳೂರಿನಿಂದ ದುಬೈಗೆ ತೆರಳುತ್ತಿದ್ದ ರುಬೀನಾ ಎಂಬ ಮಹಿಳೆಯ ಪಾಸ್ ಪೋರ್ಟನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹರಿದು ಹಾಕಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ, ವಿಮಾನ ನಿಲ್ದಾಣದ ನಿರ್ದೇಶಕ ವೆಂಕಟೇಶ್ವರ ರಾವ್ ಸಿಸಿಟಿವಿ ಫೂಟೇಜ್‍ಗಳನ್ನು ಪರಿಶೀಲಿಸಿದ್ದು, ವಿಮಾನ ನಿಲ್ದಾಣ ಸಿಬ್ಬಂದಿ ವಿರುದ್ಧ ಮಾಡಿರುವ ಆರೋಪ ಸುಳ್ಳು, ಪಾಸ್‍ಪೋರ್ಟ್‍ಗೆ ಹಾನಿಯಾದದ್ದು ಹೇಗೆಂದು ನನಗೆ ತಿಳಿದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಮಹಿಳೆ ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದ್ದಾರೆ.ಈ ಬಗ್ಗೆ ಸದ್ಯದಲ್ಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಅಧಿಕೃತ ಪ್ರಕಟಣೆಯೊಂದನ್ನು ಹೊರಡಿಸಲಿದ್ದಾರೆ ಎಂದು ವೆಂಕಟೇಶ್ವರ ರಾವ್ ಮಾಹಿತಿ ನೀಡಿದರು.