Recent Posts

Sunday, January 19, 2025
ಸುದ್ದಿ

ಉಗ್ರರ ಆಶ್ರಯ ತಾಣ ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ನೀಡಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿ ನಡೆದ ಉಗ್ರ ಕೃತ್ಯದಲ್ಲಿ 42 ಮಂದಿ ಭಾರತೀಯ ವೀರ ಯೋಧರು ಹುತಾತ್ಮರಾಗಿದ್ದು, ಈ ಕುರಿತು ವಂದೇ ಮಾತರಂ ಎಕ್ಸ್ ಪ್ರೆಸ್ ರೈಲಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಉಗ್ರರ ಆಶ್ರಯ ತಾಣವಾಗಿರುವ ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ದೇಶದ ಜನತೆ ಆಕ್ರೋಶವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಉಗ್ರಗಾಮಿ ಸಂಘಟನೆಗಳು ದೊಡ್ಡ ತಪ್ಪು ಮಾಡಿವೆ. ಇದಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಮೋದಿಯವರು ಗುಡುಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರ್ಥಿಕವಾಗಿ ಬಸವಳಿದಿರುವ ಪಾಕಿಸ್ತಾನ, ಭಾರತದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ. ಆದರೆ ಅವರ ಈ ಪ್ರಯತ್ನ ಫಲ ಕೊಡುವುದಿಲ್ಲವೆಂದು ಹೇಳಿದ ಪ್ರಧಾನಿ ನರೇಂದ್ರ ಮೋದಿಯವರು, ನಮ್ಮ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಯಾರು ಇಂತಹ ಕೃತ್ಯಕ್ಕೆ ಬೆಂಬಲಿಸಿದ್ದರೋ ಅವರು ತಕ್ಕ ಪಾಠ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು