Friday, September 20, 2024
ಸುದ್ದಿ

ಮುಲ್ಕಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಗದ್ದೆಗಿಳಿದ ಖಾಸಗಿ ಬಸ್ – ಕಹಳೆ ನ್ಯೂಸ್

ಮಂಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಗದ್ದೆಗಿಳಿದ ಘಟನೆ ಮುಲ್ಕಿ ಸಮೀಪದ ಕೊಳ್ನಾಡು ಸೇತುವೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಉಡುಪಿ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಕೊಳ್ನಾಡು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕವನ್ನು ಏರಿ ವಿರುದ್ಧದ ರಸ್ತೆಯನ್ನು ದಾಟಿ ಗದ್ದೆಗೆ ಇಳಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಬಸ್ಸಿನ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗುತ್ತಿದೆ

ಜಾಹೀರಾತು