Recent Posts

Sunday, January 19, 2025
ಸುದ್ದಿ

ಉಗ್ರರ ದಾಳಿ ಖಂಡಿಸಿದ ನಟ ಅನಂತ್ ನಾಗ್- ಕಹಳೆ ನ್ಯೂಸ್

ಮಂಗಳೂರು: ಪುಲ್ವಾಮದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಗೆ ವಿಶ್ವದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ದೇಶದೆಲ್ಲೆಡೆ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಈ ನಡುವೆ ಮತ್ತೊಂದು ಸರ್ಜಿಕಲ್ ಸ್ಟ್ರೈಗೆ ಒತ್ತಾಯ ಕೇಳಿ ಬರುತ್ತಿದೆ.

ಭದ್ರತಾ ಪಡೆಗಳ ಮೇಲೆ ನಡೆದ ಆತ್ಮಹತ್ಯಾ ದಾಳಿ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಖ್ಯಾತ ನಟ ಅನಂತ ನಾಗ್ , ಈ ಘಟನೆ ಅತ್ಯಂತ ಭೀಕರವಾಗಿದೆ. ಇದು ದೇಶದ ಜನರ ಮನಸ್ಸನ್ನು ಅಲ್ಲೋಲ ಕಲ್ಲೋಲವಾಗಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದಿಟ್ಟ ಪ್ರತಿಕ್ರಿಯೆಯನ್ನು ಜನರು ನಿರೀಕ್ಷಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು