Recent Posts

Sunday, January 19, 2025
ಸುದ್ದಿ

Breaking News : ಯೋಧರ ಬಲಿದಾನಕ್ಕೆ ಅವಮಾನ ; ಬೆಂಗಳೂರಿನ ಒರಾಯನ್ ಮಾಲ್‍ನಲ್ಲಿ ಪಾಕ್ ಪರ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಉಗ್ರನ ಆತ್ಮಾಹುತಿ ದಾಳಿಗೆ 42 ಮಂದಿ ಯೋಧರು ಹುತಾತ್ಮರಾಗಿದ್ದು, ಇಡೀ ದೇಶವೇ ಪಾಕಿಸ್ತಾನದ ವಿರುದ್ಧ ರೊಚ್ಚಿಗೆದ್ದಿದೆ. ಆದ್ರೂ ಕೆಲ ಪುಂಡರು ಪಾಕ್ ಪರ ಘೋಷಣೆ ಕೂಗುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಬೆಂಗಳೂರಿನ ಪ್ರತಿಷ್ಠಿತ ಒರಾಯನ್ ಮಾಲ್‍ನಲ್ಲಿ ಪಾಕಿಸ್ತಾನದ ಪರ ದೇಶದ್ರೋಹಿಗಳು ಘೋಷಣೆ ಕೂಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೇಶದ್ರೋಹದ ಘೋಷಣೆ ಕೇಳಿದ ಕೂಡಲೇ ಕೆರಳಿದ ಸಾರ್ವಜನಿಕರು ಓರ್ವನನ್ನು ಹಿಡಿದು ಸುಬ್ರಹ್ಮಣ್ಯ ಪೊಲೀಸರಿಗೆ ಒಪ್ಪಿಸಿದ್ದು, ವಿಚಾರಣೆ ನಡೆಸಿದ್ದಾರೆ. ಘೋಷಣೆ ಕೂಗಿ ಕೂಡಲೇ ಸಾರ್ವಜನಿಕರು ಜಮಾಯಿಸಿದ್ದನ್ನು ಕಂಡ ಮೂವರು ದೇಶದ್ರೋಹಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಲ್‍ನ ವಾಶ್ ರೂಂನಲ್ಲಿ ದಾಸರಹಳ್ಳಿ ಮೂಲದ ಇಬ್ಬರು ವ್ಯಕ್ತಿಗಳು ಪಾಕ್ ಪರ ಘೋಷಣೆ ಕೂಗಿದ್ದರು ಎಂದು ಶಂಕಿಸಲಾಗಿತ್ತು. ಆದ್ರೆ ಅವರನ್ನು ವಶಕ್ಕೆ ಪಡೆದಾಗ ನಾವು ಘೋಷಣೆ ಕೂಗಿಲ್ಲ ಎಂದಿದ್ದರು. ಹೀಗಾಗಿ ಸುಬ್ರಹ್ಮಣ್ಯ ನಗರ ಪೊಲೀಸರು ಸಿಸಿಟಿವಿ ಪರಿಶೀಲನೆಗೆ ಮುಂದಾಗಿದ್ದಾರೆ.