Monday, January 20, 2025
ಸುದ್ದಿ

Big Breaking News : ಪುಲ್ವಾಮಾದಲ್ಲಿ ಮತ್ತೆ ಉಗ್ರರ ಅಟ್ಟಹಾಸ ; ಓರ್ವ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ – ಕಹಳೆ ನ್ಯೂಸ್

ಪುಲ್ವಾಮಾ: ಪುಲ್ವಾಮಾದಲ್ಲಿ 42 ಯೋಧರು ಹುತಾತ್ಮರಾದ ಘಟನೆಯ ಬೆನ್ನಲ್ಲೆ ಮತ್ತದೇ ಪುಲ್ವಾಮದಲ್ಲಿ ಇಂದು ನಸುನಿಕಿನಿಂದ ಆರಂಭವಾಗಿ ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಕಾಳಗದಲ್ಲಿ ಓರ್ವ ಮೇಜರ್ ಸೇರಿ ನಾಲ್ವರು ಯೋಧರು ವೀರಸ್ವರ್ಗ ಸೇರಿದ್ದಾರೆ.

ಇಂದು ನಸುಕಿನಿಂದಲೇ ಪುಲ್ವಾಮದ ಪಿಂಗ್ಲಾ ಪ್ರಾಂತ್ಯದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಭೀಕರ ಚಕಮಕಿ ನಡೆಯುತ್ತಿದ್ದು, ಈ ವೇಳೆ ಸೇನೆಯ ನಾಲ್ಕು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಅಂತೆಯೇ ಹಲವು ಸೈನಿಕರು ಗಾಯಗೊಂಡಿದ್ದು, ಗಾಯಾಳು ಸೈನಿಕರನ್ನು ಸಮೀಪದ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪಿಂಗ್ಲಾ ಪ್ರಾಂತ್ಯದಲ್ಲಿ 4-5 ಉಗ್ರರು ಅಡಗಿರುವ ಶಂಕೆ ಮೇರೆಗೆ ನಸುಕಿನ ಮೂರೂವರೆ ಗಂಟೆಯಿಂದಲೇಙ ಅಲ್ಲಿ ಸೇನೆ ಶೋಧ ಕಾರ್ಯಕ್ಕೆ ಮುಂದಾಗಿತ್ತು. ಈ ವೇಳೆ ಸೈನಿಕರು ಆಗಮಿಸುತ್ತಿದ್ದಂತೆಯೇ ಅಡಗಿದ್ದ ಉಗ್ರರು ಏಕಾಏಕಿ ಸೈನಿಕರತ್ತ ಗುಂಡಿನ ಸುರಿಮಳೆ ಗರೆದಿದ್ದಾರೆ. ಈ ವೇಳೆ ಸ್ಥಳದಲ್ಲೇ ನಾಲ್ಕು ಮಂದಿ ಸೈನಿಕರ ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಮೇಜರ್ ಹುದ್ದೆಯ ಸೈನಿಕಾಧಿಕಾರಿ ಕೂಡ ಸೇರಿದ್ದಾರೆ ಎನ್ನಲಾಗಿದೆ.

ಘಟನಾ ಪ್ರದೇಶದಲ್ಲಿ ಎನ್’ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.