Monday, January 20, 2025
ಸುದ್ದಿ

ಉಗ್ರರ ದಾಳಿ ಬೆಂಬಲಿಸಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಯುವಕನ ಬಂಧನ – ಕಹಳೆ ನ್ಯೂಸ್

ರಾಯಚೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಯೋಧರು ಹುತಾತ್ಮರಾಗಿದ್ದು, ಈ ಉಗ್ರರ ದಾಳಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಯುವಕನನ್ನು ರಾಯಚೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈತನನ್ನು ಕಾಡ್ಲೂರು ಗ್ರಾಮದ ಮಹಮ್ಮದ್ ರಫಿಕ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಫೆಬ್ರವರಿ 15 ರಂದು ಫೇಸ್ ಬುಕ್ ಖಾತೆಯಲ್ಲಿ ಉಗ್ರರ ದಾಳಿ ಬೆಂಬಲಿಸಿ, ಪಾಕಿಸ್ತಾನ ಪರ ಘೋಷಣೆ ಇರುವ ವಿಡಿಯೋವನ್ನು ಲೈಕ್ ಮಾಡಿ, ಶೇರ್ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು