Monday, January 20, 2025
ಸುದ್ದಿ

Breaking News : ಮೂತ್ರ ವಿಸರ್ಜನೆ ಮಾಡ್ತಿದ್ದವರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ ; ಇಬ್ಬರ ದುರ್ಮರಣ – ಕಹಳೆ ನ್ಯೂಸ್

ತುಮಕೂರು: ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.

ಸುನಿಲ್ ಗೌಡ ಮತ್ತೆ ಶಶಿಕುಮಾರ್ ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇಬ್ಬರ ಮೃತದೇಹವನ್ನು ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಉರ್ಕೇಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕನಕಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಯುವಕರು ಕೊಲ್ಲೂರು, ಧರ್ಮಸ್ಥಳ ದೇವಾಲಯಗಳ ದರ್ಶನ ಮಾಡಿ ವಾಪಸ್ ತೆರಳುವಾಗ ಈ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಬಂದ ಸಿಟಿ ರವಿ ಅವರ ಫಾರ್ಚೂನರ್ ಕಾರು ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಸುನಿಲ್ ಗೌಡ ಮತ್ತು ಶಶಿಕುಮಾರ್ ಎಂಬವರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುನಿರಾಜು, ಜಯಚಂದ್ರ, ಪುನೀತ್ ಹಾಗೂ ಮಂಜುನಾಥ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಸಿಟಿ ರವಿ ಮತ್ತು ಆತನ ಜೊತೆ ಪ್ರಯಾಣಿಸುತ್ತಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬೆಂಗಳೂರಿಗೆ ಸಾಗಿಸಲಾಗಿದೆ.

ಸಿ.ಟಿ ರವಿ ಅವರ ಕಾರಿನಲ್ಲಿ ಮೂರು ಜನ ಇದ್ದರು. ಘಟನೆಯ ಬಳಿಕ ಶಾಸಕರು ಬೇರೆ ಕಾರು ಹತ್ತಿ ಹೊರಟು ಹೋಗಿದ್ದಾರೆ. ಆದ್ರೆ ಬಳಿಕ ನಮ್ಮನ್ನು ಯಾರೂ ಕೆಳೋಕೆ ಬಂದಿಲ್ಲ ಎಂದು ಗಾಯಾಳು ಪುನೀತ್ ಆರೋಪಿಸಿದ್ದಾರೆ. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.