Wednesday, January 22, 2025
ಸುದ್ದಿ

ಉತ್ತರಪ್ರದೇಶದ ರಾಯ್‍ಬರೇಲಿಯಿಂದ ಮತ್ತೊಮ್ಮೆ ಸ್ಪರ್ಧೆ ಮಾಡಲಿರುವ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ – ಕಹಳೆ ನ್ಯೂಸ್

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಿನಿಂದಲೂ ಸೋನಿಯಾ ಗಾಂಧಿ ರಾಜಕೀಯದಿಂದ ದೂರ ಉಳಿಯಲಿದ್ದು, ಈ ಸಲದ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡುವುದು ಅನುಮಾನ ಎಂಬ ಮಾತುಗಳು ಗಂಭೀರವಾಗಿ ಕೇಳಿ ಬಂದಿದ್ದವು. ಆದರೆ ಅದೆಲ್ಲ ಸುಳ್ಳು ಎಂಬುದು ಇದೀಗ ಕನ್ಫರ್ಮ್ ಆಗಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಗೆ ಈ ಕ್ಷೇತ್ರವನ್ನ ಸೋನಿಯಾ ಬಿಟ್ಟುಕೊಟ್ಟು ತಾವೂ ರಾಜಕೀಯ ನಿವೃತ್ತಿ ಪಡೆದುಕೊಳ್ಳಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಉತ್ತರಪ್ರದೇಶದ ರಾಯ್‍ಬರೇಲಿಯಿಂದ ಮತ್ತೊಮ್ಮೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು