Monday, January 20, 2025
ರಾಜಕೀಯಸುದ್ದಿ

ಪಕ್ಷೇತರವಾಗಿ ಕಣಕ್ಕಿಳಿಯಲು ಸುಮಲತಾ ಅಂಬರೀಶ್ ನಿರ್ಧಾರ – ಕಹಳೆ ನ್ಯೂಸ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಇದಕ್ಕೆ ಪೂರಕವಾಗಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿರುವ ಅವರಿಗೆ ಮತದಾರರಿಂದ ಭರ್ಜರಿ ಸ್ಪಂದನೆ ಸಿಗುತ್ತಿದೆ.

ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ನಿಂದ ಟಿಕೆಟ್ ಬಯಸಿದ್ದು, ಆದರೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಕಾರಣ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೀಗಾಗಿ ಪಕ್ಷೇತರವಾಗಿ ಕಣಕ್ಕಿಳಿಯಲು ಸುಮಲತಾ ಅಂಬರೀಶ್ ನಿರ್ಧರಿಸಿದ್ದಾರೆಂದು ಹೇಳಲಾಗಿದ್ದು, ಇದು ಜೆಡಿಎಸ್ ಮುಖಂಡರನ್ನು ಕಂಗೆಡುವಂತೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತೀರ್ಮಾನಿಸಿದ್ದು, ಆದರೆ ಸುಮಲತಾ ಸ್ಪರ್ಧೆಯಿಂದ ಗೆಲುವು ಕಠಿಣವಾಗಬಹುದು ಎಂಬುದು ಜೆಡಿಎಸ್ ನಾಯಕರ ಆತಂಕಕ್ಕೆ ಕಾರಣವಾಗಿದೆ.