Recent Posts

Sunday, January 19, 2025
ಸುದ್ದಿ

ಸ್ವಾತಂತ್ರ್ಯ ಹೋರಾಟಗಾರ ಕೋ. ಚನ್ನಬಸಪ್ಪ ಇನ್ನಿಲ್ಲ – ಕಹಳೆ ನ್ಯೂಸ್

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಹಿತಿ ಕೋ. ಚನ್ನಬಸಪ್ಪ ಇಂದು ವಿಧಿವಶರಾಗಿದ್ದಾರೆ.

98 ವರ್ಷದ ಕೋ. ಚನ್ನಬಸಪ್ಪ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಾನೂನು ಪದವೀಧರರಾಗಿದ್ದ ಚನ್ನಬಸಪ್ಪ, ವಿದ್ಯಾರ್ಥಿ ದೆಸೆಯಲ್ಲೇ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗಿಯಾಗಿ ಸೆರೆವಾಸ ಅನುಭವಿಸಿದ್ದರು. ವಿಜಯಪುರದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕೋ. ಚನ್ನಬಸಪ್ಪ ಅವರಿಗೆ ಹಲವು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು