ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಆರೋಪಿ ಚಂದ್ರಕಾಂತ ಎಂಬಾತನಿಗೆ 2 ನೇ ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ 10 ವರ್ಷ ಕಠಿಣ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.
10 ಸಾವಿರ ರೂ. ದಂಡದಲ್ಲಿ 9 ಸಾವಿರ ರೂ. ಬಾಲಕಿಗೆ ಹಾಗೂ 1 ಸಾವಿರ ರೂ. ಸರ್ಕಾರಕ್ಕೆ ಕೊಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಅಲ್ಲದೆ ಬಾಲಕಿಗೆ ಕುಟುಂಬ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡಬೇಕೆಂದು ಹೇಳಿದೆ.