Friday, November 15, 2024
ಸುದ್ದಿ

ವಯೋವೃದ್ಧರಿಗೆ ಆರೋಗ್ಯ ಇಲಾಖೆಯಿಂದ ಸಿಹಿ ಸುದ್ದಿ – ಕಹಳೆ ನ್ಯೂಸ್

general ward of hospital , india

ಸಾಮಾನ್ಯವಾಗಿ ವಯೋವೃದ್ಧರು ಅನಾರೋಗ್ಯಕ್ಕೆ ಈಡಾಗುವುದು ಹೆಚ್ಚು. ಇಂತಹ ಸಂದರ್ಭಗಳಲ್ಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿದರೆ ಮೈಲುದ್ದದ ಕ್ಯೂ ಇದ್ದೇ ಇರುತ್ತದೆ. ಮೊದಲೇ ವೃದ್ಧಾಪ್ಯ ಜೊತೆಗೆ ಅನಾರೋಗ್ಯ ಇರುವುದರಿಂದ ಗಂಟೆಗಟ್ಟಲೆ ಕಾದು ಚಿಕಿತ್ಸೆ ಪಡೆಯುವುದು ಕಷ್ಟ ಸಾಧ್ಯ. ಇಂಥವರಿಗೆ ಸಿಹಿ ಸುದ್ದಿಯೊಂದನ್ನು ಆರೋಗ್ಯ ಇಲಾಖೆ ನೀಡಿದೆ.

ವಯೋವೃದ್ಧರಿಗೆ ಸುಲಭವಾಗಿ ಚಿಕಿತ್ಸೆ ಲಭ್ಯವಾಗಬೇಕೆಂಬ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿರುವ ಆರೋಗ್ಯ ಇಲಾಖೆ, ವಯೋವೃದ್ಧರಿಗಾಗಿಯೇ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲು ತೀರ್ಮಾನ ಕೈಗೊಂಡಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಯೋವೃದ್ಧರಿಗೆ ಪ್ರತ್ಯೇಕ ವಾರ್ಡ್ ಆರಂಭಿಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸುವ ಕಾರ್ಯ ಆರಂಭವಾಗಿದ್ದು, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಸ್ಥಳಾವಕಾಶವಿದ್ದರೆ ವೃದ್ಧರಿಗಾಗಿಯೇ ಪ್ರತ್ಯೇಕ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸ್ಥಳಾವಕಾಶವಿರದಿದ್ದ ಪಕ್ಷದಲ್ಲಿ ಆಸ್ಪತ್ರೆಯಲ್ಲೇ ಪ್ರತ್ಯೇಕ ವಿಭಾಗ ಆರಂಭಿಸಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು