ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಬಾರಿ ರಾಜ್ಯದ 6.80 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಈಗಾಗಲೇ ಸಕಲ ಸಿದ್ಧತೆ ನಡೆದಿದೆ.
ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಸಲುವಾಗಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದು, ಮಾರ್ಚ್ 18 ರಂದು ಪರೀಕ್ಷೆ ಪೂರ್ಣಗೊಳ್ಳಲಿದೆ.
ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ ತಲೆದೋರದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಖುದ್ದು ಸಭೆ ನಡೆಸಿ ಸೂಚನೆ ನೀಡಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಈ ನಿಟ್ಟಿನಲ್ಲಿ ಸಿದ್ಧತೆ ಕೈಗೊಂಡಿದೆ.