Recent Posts

Sunday, January 19, 2025
ರಾಜಕೀಯಸುದ್ದಿ

ಉಗ್ರರನ್ನು ಸದೆಬಡಿದ ಘಟನೆ ಕುರಿತು ಹೆಚ್‍ಡಿಕೆ ಪ್ರತಿಕ್ರಿಯೆ – ಕಹಳೆ ನ್ಯೂಸ್

ಹಾಸನ: ಭಾರತೀಯ ಸೈನಿಕರು ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರನ್ನು ಸದೆಬಡಿದ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇದು ಭಾರತೀಯ ಸೈನಿಕರ ಸಾಹಸ. ಆದರೆ ಬಿಜೆಪಿಯವರು ತಾವೇ ಪಾಕಿಸ್ತಾನದ ಮೇಲೆ ಯುದ್ಧ ಮಾಡಿದಂತೆ ಸಂಭ್ರಮಿಸುತ್ತಿದ್ದಾರೆ. ಈ ದೇಶಕ್ಕೆ ರಕ್ಷಣೆ ಕೊಡುವವರು ನಾವೇ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣೆ ಸಂದರ್ಭದಲ್ಲಿ ರೈತರ ನೆನಪಾಗಿದೆ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿ, ಈಗ ರೈತರಿಗೆ ವರ್ಷಕ್ಕೆ ಆರು ಸಾವಿರ ನೀಡುವುದಾಗಿ ಮೋದಿ ಘೋಷಿಸಿದ್ದಾರೆ. ಆದರೆ ನಮ್ಮ ಸರ್ಕಾರ ರೈತರಿಗೆ ನೆರವಾಗಲು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು