Monday, November 25, 2024
ಸುದ್ದಿ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ – ಕಹಳೆ ನ್ಯೂಸ್

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್‍ನಡಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ತಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಪರೀಕ್ಷೆಗಳು ನಡೆಯಲಿದೆ. ಮೊದಲನೇ ದಿನ ಅರ್ಥಶಾಸ್ತ್ರ ಹಾಗೂ ಭೌತಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ 1.013 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 6,73,606 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದ ಬಸ್ ಪಾಸನ್ನೇ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದಾಗಿದೆ.