Tuesday, January 21, 2025
ಸುದ್ದಿ

ವಿಂಗ್ ಕಮಾಂಡರ್ ಅಭಿನಂದನ್‌ ಬಿಡುಗಡೆಗೆ ಭರ್ಜರಿ ಸ್ವಾಗತಕ್ಕೆ ಸಿದ್ದತೆ – ಕಹಳೆ ನ್ಯೂಸ್

ಪಾಕಿಸ್ತಾನದ ವಶದಲ್ಲಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಪಾಕಿಸ್ತಾನ ಇಂದು ಬಿಡುಗಡೆ ಮಾಡಲಿದ್ದು, ಅವರನ್ನು ವಾಗಾ ಗಡಿಯಲ್ಲಿ ಭಾರತೀಯ ವಾಯುಸೇನೆ ಸ್ವಾಗತಿಸಲಿದೆ.

ಮಿಗ್ 21 ಯುದ್ಧವಿಮಾನದ ಪೈಲಟ್ ಅಭಿನಂದನ್ ಅವರು ಫೆಬ್ರವರಿ 27 ರಂದು ಪಾಕ್ ಸೇನೆಯ ವಿಮಾನಗಳನ್ನು ಹಿಮ್ಮೆಟ್ಟಿಸುವ ಸಮಯದಲ್ಲಿ ಪಾಕ್ ಸೇನೆಯ ವಶಕ್ಕೆ ಸಿಕ್ಕಿದ್ದರು. ಸೇನಾ ಹೀರೋ ಅಭಿನಂದನ್ ಬೇಷರತ್ ಬಿಡುಗಡೆಗೆ ೭ ಕಾರಣ ಪಾಕಿಸ್ತಾನವು ಅಭಿನಂದನ್ ಅವರನ್ನು ವಶಕ್ಕೆ ಪಡೆದಿದ್ದರ ಬಗ್ಗೆ ಇಡೀ ವಿಶ್ವವೂ ಖಂಡನೆ ವ್ಯಕ್ತಪಡಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಮೇಲೆ ಒತ್ತಡ ಹೆಚ್ಚಿದ್ದರಿಂದ ಬೆದರಿದ ಪಾಕಿಸ್ತಾನ ‘ಶಾಂತಿಯ ಸಂಕೇತವಾಗಿ ನಾವು ಅಭಿನಂದನ್ ಅವರನ್ನು ನಾಳೆ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ನಿನ್ನೆ ಸಂಸತ್ತಿನಲ್ಲಿ ಘೋಷಿಸಿತ್ತು. ಅಭಿನಂದನ್ ಬಿಡುಗಡೆಗಾಗಿ ಉಸಿರು ಬಿಗಿಹಿಡಿದು ಕುಳಿತಿದ್ದ ಭಾರತೀಯರು, ಪಾಕ್ ಸಂಸತ್ತಿನಲ್ಲಿ ಇಮ್ರಾನ್ ಖಾನ್ ಈ ಘೋಷಣೆ ಮಾಡುತ್ತಿದ್ದಂತೆಯೇ ಸಂಭ್ರಮಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಭಿನಂದನ್ ಬಿಡುಗಡೆಯ ನಿಮಿತ್ತ ಈಗಾಗಲೇ ವಾಗಾ ಗಡಿಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಅವರನ್ನು ಸ್ವಾಗತಿಸಲು ಭಾರತೀಯ ವಾಯುಸೇನೆ ಸಿದ್ಧವಾಗಿದೆ. ಇಂದು ಮಧ್ಯಾಹ್ನ ಸುಮಾರು 12 ರಿಂದ 02 ಗಂಟೆ ಅವಧಿಯಲ್ಲಿ ಅಭಿನಂದನ್ ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ.