Tuesday, January 21, 2025
ಸುದ್ದಿ

ರಾಜ್ಯದಲ್ಲಿ 12 ಹೊಸ ತಾಲೂಕು ಘೋಷಣೆ: ಆರ್.ವಿ. ದೇಶಪಾಂಡೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ 12  ಹೊಸ ತಾಲೂಕುಗಳನ್ನು ರಚನೆ ಮಾಡಲಾಗಿದೆ. ಕಂದಾಯ ಇಲಾಖೆಯಿಂದ 12 ಹೊಸ ತಾಲೂಕುಗಳನ್ನು ರಚಿಸಿ ಆದೇಶ ಹೊರಡಿಸಲಾಗಿದೆ ಎಂದು ಇಲಾಖೆಯ ಸಚಿವ ಆರ್.ವಿ. ದೇಶಪಾಂಡೆ ಮಾಹಿತಿ ನೀಡಿದ್ದಾರೆ.

ಹಾಸನ ಜಿಲ್ಲೆಯ ಶಾಂತಿಗ್ರಾಮ, ಬೆಳಗಾವಿಯ ಯರಗಟ್ಟಿ, ಕೊಡಗು ಜಿಲ್ಲೆಯ ಕುಶಾಲನಗರ, ಪೊನ್ನಂಪೇಟೆ, ವಿಜಯಪುರ ಜಿಲ್ಲೆಯ ಆಲಮೇಲ, ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಉಳ್ಳಾಲ, ಮೈಸೂರು ಜಿಲ್ಲೆಯ ಸಾಲಿಗ್ರಾಮ, ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು, ಬಾಗಲಕೋಟೆ ಜಿಲ್ಲೆಯ ತೇರದಾಳ, ಚಿಕ್ಕಮಗಳೂರಿನ ಕಳಸ ಪಟ್ಟಣಗಳನ್ನು ತಾಲೂಕು ಕೇಂದ್ರಗಳಾಗಿ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಹೊಸ ತಾಲ್ಲೂಕುಗಳನ್ನು ಘೋಷಿಸಿದ್ದರು. ಬಳಿಕ ಅವುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು. ಈಗ ಕಂದಾಯ ಇಲಾಖೆಯಿಂದ 12 ಹೊಸ ತಾಲೂಕು ರಚಿಸಿ ಆದೇಶ ಹೊರಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು