Tuesday, January 21, 2025
ಸುದ್ದಿ

ಸಾಮಾಜಿಕ ಜಾಲತಾಣಗಳ ಬಳಕೆಗೆ ಮಿತಿಯಿರಲಿ: ದಿವಾಕರ ದಾಸ್ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನದಲ್ಲೇ ಗುರಿಯನ್ನು ಇಟ್ಟುಕೊಂಡು ವ್ಯಾಸಂಗಮಾಡಿದರೆ ಅದುವೇ ಸಾಧನೆಯ ಮೆಟ್ಟಿಲುಗಳನ್ನು ಏರಲು ಸಹಾಯ ಮಾಡುತ್ತದೆ. ಅದಕ್ಕಾಗಿ ವಿದ್ಯಾರ್ಥಿಗಳು ಆದಷ್ಟು ಮೊಬೈಲ್, ಸಾಮಾಜಿಕ ಜಾಲತಾಣಗಳನ್ನು ಬೇಕಾದಷ್ಟೆ ಬಳಸಿದರೆ ಸಾಧನೆ ಮಾಡಲು ಹಾಗೂ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ, ಎಸ್‍ಎಲ್‍ವಿ ಗ್ರೂಪ್‍ನ ಸಂಸ್ಥಾಪಕ ದಿವಾಕರ ದಾಸ್ ಅಭಿಪ್ರಾಯಪಟ್ಟರು.

ಅವರು ಕಾಲೇಜಿನ ಆವರಣದಲ್ಲಿ ಬುಧವಾರ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ನಡೆದ ಬಹುಮಾನ ವಿತರಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮಗೆ ಕಲಿಸಿದ ಅಧ್ಯಾಪಕರನ್ನು ಹಾಗೂ ಅವರ ಮಾರ್ಗದರ್ಶನದಿಂದಲೇ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅದೇ ರೀತಿ ಕಾಲೇಜಿನಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸರ್ವತೋಮುಖ ಅಭಿವೃದ್ಧಿಗೆ ಇದು ಕಾರಣವಾಗಬೇಕು. ಹೆತ್ತ ತಂದೆ, ತಾಯಿ, ಕಲಿಸಿದ ಗುರುಗಳು ನಮ್ಮ ಶ್ರೇಯಸ್ಸಿಗೆ ಕಾರಣೀಭೂತರಾಗಿರುತ್ತಾರೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸಂಪ್ಯ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಚಂದ್ರ ಕೆ. ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಠ್ಯದ ಜತೆಗೆ ಕ್ರೀಡೆಯಲ್ಲೂ ಸಕ್ರೀಯವಾಗಿ ಭಾಗವಹಿಸಿ ಆರೋಗ್ಯದ ದೃಷ್ಟಿಯಿಂದಲೂ ಇದು ಸಹಾಯಕ. ಪ್ರತಿಯೊಬ್ಬನೂ ತಾನು ಮಾಡುವ ಕೆಲಸದಲ್ಲಿನ ಆಸಕ್ತಿ ಹಾಗೂ ಪ್ರಾಮಾಣಿಕತೆಯಿಂದಲೇ ಸಾಧನೆಯನ್ನು ಮಾಡಲು ಕಾರಣವಾಗುತ್ತದೆ. ಏಕೆಂದರೆ ಈ ಎರಡು ಗುಣವು ನಮ್ಮ ಕೆಲಸವನ್ನು ಉನ್ನತಮಟ್ಟಕ್ಕೇರಿಸುತ್ತದೆ ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಸೇಡಿಯಾಪು ಜನಾರ್ದನ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಎಂದರೆ ಒಗ್ಗಟ್ಟು. ಹಾಗಾಗಿ ದೇಶದ ರಕ್ಷಣೆ ಹಾಗೂ ಏಳಿಗೆಯಲ್ಲಿ ಮುಂದಿನ ಜನಾಂಗದ ಪಾತ್ರ ಬಹಳ ಮುಖ್ಯ. ಹಾಗಾಗಿ ಕೃಷಿ ಪರಂಪರೆಯ ದೇಶವಾದ್ದರಿಂದ ವಿದ್ಯಾರ್ಥಿಗಳು ಕೃಷಿಯ ಬಗ್ಗೆ ಆಸಕ್ತಿಯನ್ನು ತೋರಿಸಬೇಕು ಎಂದು ಕಿವಿಮಾತು ಹೇಳಿದರು.

ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆ, ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ರವಿಶಂಕರ್, ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಕೃಷ್ಣ ಕಾರಂತ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು ಪ್ರಸ್ತಾವನೆಗೈದು, ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಯತೀಶ್ ವಂದಿಸಿದರು. ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.