ಮಂಗಳೂರು: ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕ ನಗರದ ಮನೆವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಪಡೆದು ದಾಳಿ ನಡೆಸಿದರು.
ದಾಳಿಯಲ್ಲಿ ವೇಶ್ಯಾವಾಟಿಕೆ ಗೃಹ ನಡೆಸುವ ಮಹಿಳೆಯ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ಅಶೋಕ ನಗರದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಸಿಸಿಬಿ ಪೊಲೀಸರು, ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಮೊಬೈಲ್ ಮತ್ತು ೬,೪೦೦ ರೂ. ನಗದು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ನೊಂದ ಇಬ್ಬರು ಯುವತಿಯರನ್ನು ರಕ್ಷಿಸಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕಕ್ಕೆ ಕಳುಹಿಸಲಾಗಿದೆ.
ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಶಾಂತಾರಾಮ, ಉರ್ವ ಇನ್ಸ್ಪೆಕ್ಟರ್ ಕೆ.ಎಂ.ಶರೀಫ್, ಎಸ್ಐ ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.