Recent Posts

Monday, January 20, 2025
ಸುದ್ದಿ

ಪಾಕಿಸ್ತಾನ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ; ಆರೋಪಿಯ ಬಂಧನ – ಕಹಳೆ ನ್ಯೂಸ್

ಉಡುಪಿ :  ಪಾಕಿಸ್ತಾನ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಪೋಸ್ಟ್ ಹಾಕುತ್ತಿರುವವರ ಸಂಖ್ಯೆ ಜಾಸ್ತಿಯಾಗಿದ್ದು, ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ.

ದೇಶದ್ರೋಹದ ಸ್ಟೇಟಸ್ ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದರೂ, ಇಂತಹ ಕೃತ್ಯಗಳು ಮುಂದುವರೆದಿವೆ. ಪಾಕಿಸ್ತಾನದ ಪರ ಘೋಷಣೆ ಕೂಗಿ ಮಲ್ಪೆ ಬೀಚ್ ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಕಿಡಿಗೇಡಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತೊಟ್ಟಂ ನಿವಾಸಿ ೧೮ ವರ್ಷದ ಸೃಜನ್ ಬಂಧಿತ ಆರೋಪಿ. ಈತ ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ, ಮಲ್ಪೆ ಬೀಚ್ ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದು ಗಮನಕ್ಕೆ ಬಂದ ಕೂಡಲೇ ಕ್ರಮ ಕೈಗೊಂಡ ಪೊಲೀಸರು ಸೃಜನ್ ನನ್ನು ಬಂಧಿಸಿದ್ದು, ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.