ಸೈನ್ಯದ ಹೋರಾಟದ ಬಗ್ಗೆ ದೇಶದ್ರೋಹಿ ಹೇಳಿಕೆ ನೀಡುವವರನ್ನು ಪಕ್ಷದಿಂದ ಕಿತ್ತು ಹಾಕಬೇಕು: ಶೋಭಾ ಕರಂದ್ಲಾಜೆ – ಕಹಳೆ ನ್ಯೂಸ್
ಮಂಗಳೂರು: ಸೈನಿಕರನ್ನು ಹುರಿದುಂಬಿಸಬೇಕಾದವರೇ ಸೈನ್ಯದ ಹೋರಾಟದ ಬಗ್ಗೆ ಸಂಶಯ ವ್ಯಕ್ತ ಮಾಡುವುದು ದೇಶದ್ರೋಹದ ಕೆಲಸ. ಅಂತವರನ್ನು ಕಾಂಗ್ರೆಸ್ ಪಕ್ಷದಿಂದ ಕಿತ್ತು ಹಾಕಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ರಾಷ್ಟ್ರೀಯ ಮುಖಂಡರನ್ನ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಪುಲ್ವಾಮಾ ಘಟನೆಯ ಬಳಿಕ ಭಾರತದ ವಾಯುಪಡೆ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿರುವುದಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ನ ಮುಖಂಡರುಗಳು ಸಾಕ್ಷ್ಯ ಕೇಳುತ್ತಿರುವುದು ಭಯ ಹುಟ್ಟಿಸುತ್ತಿದೆ ಎಂದರು.
ಕಾಂಗ್ರೆಸ್ ಮುಖಂಡರ ಮಾನಸಿಕತೆ ನಮ್ಮೆಲ್ಲರನ್ನೂ ಭಯಗೊಳಿಸಿದೆ. ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರುಗಳು ಇಂತಹ ದೇಶದ್ರೋಹಿ ಹೇಳಿಕೆ ನೀಡುವವರನ್ನು ಪಕ್ಷದಿಂದ ಕಿತ್ತು ಹಾಕಬೇಕು ಎಂದು ಆಗ್ರಹಿಸಿದರು.