Tuesday, January 21, 2025
ಸುದ್ದಿ

ಸರದಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದೇವರ ದರ್ಶನಕ್ಕೆ ಮುಂದಾದ ಸಚಿವರಿಗೆ ನೇರವಾಗಿ ಪ್ರಶ್ನಿಸಿದ ವಿದ್ಯಾರ್ಥಿನಿ – ಕಹಳೆ ನ್ಯೂಸ್

ಸೋಮವಾರ ಶಿವರಾತ್ರಿ ಸಂದರ್ಭದಲ್ಲಿ ವಿಜಯಪುರದ ಬಿ.ಎಲ್.ಡಿ.ಇ. ಸಂಸ್ಥೆಯ ಆವರಣದಲ್ಲಿರುವ ಲಿಂಗದ ಗುಡಿಯೊಳಗೆ ಸಚಿವ ಎಂ.ಬಿ. ಪಾಟೀಲ್ ಎಲ್ಲ ಭಕ್ತರಂತೆ ಸರದಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದೇವರ ದರ್ಶನಕ್ಕೆ ಮುಂದಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಪ್ರಶ್ನಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ಈ ವೇಳೆ ಸರದಿ ಸಾಲಿನಲ್ಲಿ ನಿಂತಿದ್ದ ವಿದ್ಯಾರ್ಥಿನಿಯೊಬ್ಬರು, ತಾವು ಒಂದು ಗಂಟೆಯಿಂದ ಕಾಯುತ್ತಿದ್ದು ನೀವು ಈಗ ನೇರವಾಗಿ ದೇವರ ದರ್ಶನ ಪಡೆಯುತ್ತಿದ್ದೀರಿ ಎಂದು ಆಕ್ಷೇಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕೆ ಉತ್ತರಿಸಿದ ಎಂ.ಬಿ. ಪಾಟೀಲ್, ನನಗೂ ಸಾಮಾನ್ಯರಂತೆ ಬದುಕುವ ಇಚ್ಛೆಯಿದೆ. ಹೀಗಾಗಿಯೇ ಜೀರೋ ಟ್ರಾಫಿಕ್ ಬೇಡವೆಂದು ಹೇಳಿದ್ದೇನೆ. ಆದರೆ ಈಗ ತುರ್ತು ಕೆಲಸ ಇರುವ ಕಾರಣ ನೇರವಾಗಿ ದೇವರ ದರ್ಶನ ಪಡೆದಿದ್ದೇನೆ ಎಂದು ಸಮಜಾಯಿಷಿ ನೀಡಿದ್ದು, ಈ ಉತ್ತರಕ್ಕೆ ವಿದ್ಯಾರ್ಥಿನಿ ಸಮಾಧಾನಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು