Monday, January 20, 2025
ಸುದ್ದಿ

ಉಡುಪಿಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ: ಗಂಭೀರ ಗಾಯದಿಂದ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಉಡುಪಿ: ಮಹಿಳೆಯೊಬ್ಬರ ಮೇಲೆ ಚಿರತೆಯೊಂದು ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಜಪ್ತಿ ಎಂಬಲ್ಲಿ ಈ ಘಟನೆ ನಡೆದಿದೆ.ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಮನೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದಾಗ ಸಮೀಪದ ಹಾಡಿಯಿಂದ ಹಾರಿದ ಚಿರತೆ ಮಹಿಳೆ ಮೇಲೆ ದಾಳಿ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಚಿರತೆ ದಾಳಿಗೆ ಒಳಗಾದ ಮಹಿಳೆಯ ಮುಖ, ಹಣೆ, ಕುತ್ತಿಗೆ ಹಾಗೂ ಕಿವಿ, ಕೈ ಭಾಗಕ್ಕೆ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಗಾಯಗೊಂಡ ಮಹಿಳೆಗೆ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಕುಂದಾಪುರದ ಜಪ್ತಿ ಭಾಗದಲ್ಲಿ ಚಿರತೆ ಓಡಾಟ ಇದೇ ಮೊದಲು ಎನ್ನಲಾಗಿದೆ. ಸದ್ಯ ಚಿರತೆ ದಾಳಿ ಮಾಡಿದ ಪ್ರದೇಶಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.